Public Prime News

CLEAR VISION, TRUE MISSION

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್ ಅರ್ಜಿ ವಿಚಾರಣೆ ಅ.14ಕ್ಕೆ ಮುಂದೂಡಿಕೆ..!
crime

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್ ಅರ್ಜಿ ವಿಚಾರಣೆ ಅ.14ಕ್ಕೆ ಮುಂದೂಡಿಕೆ..!

Public Prime News

Public Prime News

Reported by Public Prime News

ನವದೆಹಲಿ: 
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸಲ್ಲಿಸಿರುವ ಅರ್ಜಿಯ ವಿಚಾರಣೆ ಸುಪ್ರೀಂ ಕೋರ್ಟ್‌ನಲ್ಲಿ ಇಂದು ನಡೆದಿದ್ದು, ಮುಂದಿನ ವಿಚಾರಣೆಯನ್ನು ಅಕ್ಟೋಬರ್ 14ಕ್ಕೆ ಮುಂದೂಡಲಾಗಿದೆ.

ವಿಚಾರಣೆ ವೇಳೆ ಅರ್ಜಿಗೆ ಸಂಬಂಧಿಸಿದ ಹಿಂದಿನ ತೀರ್ಪುಗಳ ಪ್ರತಿಗಳನ್ನು ಪರಿಶೀಲಿಸಬೇಕಿದೆ ಎಂದು ನ್ಯಾಯಾಲಯ ತಿಳಿಸಿದೆ. ಹೀಗಾಗಿ ಪ್ರಕರಣದ ವಿಚಾರಣೆಯನ್ನು ಮುಂದಿನ ವಾರಕ್ಕೆ ಮುಂದೂಡಲಾಗಿದೆ.

ಈ ಪ್ರಕರಣದಲ್ಲಿ 14ನೇ ಆರೋಪಿಯಾಗಿದ್ದ ಪ್ರದೋಷ್ ರಾವ್ ಮಾಫಿ ಸಾಕ್ಷಿಯಾಗಿರುವುದು ಪ್ರಮುಖ ಬೆಳವಣಿಗೆಯಾಗಿದೆ. ಪ್ರದೋಷ್ ಅವರು ನ್ಯಾಯಾಲಯದ ಮುಂದೆ ನೀಡುತ್ತಿರುವ ಹೇಳಿಕೆ ಪ್ರಕರಣದ ಮುಂದಿನ ಕಾನೂನು ಪ್ರಕ್ರಿಯೆಯಲ್ಲಿ ಮಹತ್ವ ಪಡೆದುಕೊಂಡಿದೆ.

ಮಾಫಿ ಸಾಕ್ಷಿಯಾಗಿ ಪ್ರದೋಷ್ ನೀಡುವ ಹೇಳಿಕೆಯನ್ನು ಪರಿಗಣಿಸಬಾರದು ಎಂದು ದರ್ಶನ್ ಪತ್ನಿ ವಿಜಯಲಕ್ಷ್ಮಿ ಪರವಾಗಿ ಮನವಿ ಮಾಡಲಾಗಿದೆ. ಮಾಫಿ ಸಾಕ್ಷಿಗೆ ಸಂಬಂಧಿಸಿದ ಪ್ರಕ್ರಿಯೆ ಸರಿಯಾದ ರೀತಿಯಲ್ಲಿ ನಡೆದಿಲ್ಲ ಹಾಗೂ ತಮ್ಮನ್ನು ಸಂಪೂರ್ಣವಾಗಿ ಮಾಹಿತಿ ಇಲ್ಲದ ಸ್ಥಿತಿಯಲ್ಲಿ ಇರಿಸಲಾಗಿದೆ ಎಂದು ಅರ್ಜಿಯಲ್ಲಿ ಆಕ್ಷೇಪಿಸಲಾಗಿದೆ.

ಪ್ರದೋಷ್ ವಿಚಾರಣೆಯಲ್ಲಿ ಏನು ಹೇಳುತ್ತಿದ್ದಾರೆ ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲದಿರುವುದರಿಂದ, ಅವರ ಹೇಳಿಕೆಯನ್ನು ನ್ಯಾಯಾಲಯ ಪರಿಗಣಿಸಬಾರದು ಎಂಬ ವಾದವನ್ನೂ ಮುಂದಿಡಲಾಗಿದೆ.

ಈ ನಡುವೆ ಪ್ರದೋಷ್ ಅವರ ಹೇಳಿಕೆ ಪ್ರಕರಣದ ತನಿಖೆ ಹಾಗೂ ಮುಂದಿನ ನ್ಯಾಯಾಂಗ ಪ್ರಕ್ರಿಯೆಯಲ್ಲಿ ಯಾವ ರೀತಿಯ ಪರಿಣಾಮ ಬೀರುತ್ತದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ದರ್ಶನ್ ಪರ ಕಾನೂನು ತಂಡ ಈಗಾಗಲೇ ಮಾಫಿ ಸಾಕ್ಷಿ ಸ್ಥಾನಮಾನಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನೆ ಎತ್ತಿದೆ.

ಹೀಗಾಗಿ ಅಕ್ಟೋಬರ್ 14ರಂದು ನಡೆಯಲಿರುವ ಮುಂದಿನ ವಿಚಾರಣೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ದೃಷ್ಟಿಯಿಂದ ಮಹತ್ವ ಪಡೆದುಕೊಂಡಿದೆ. ಸುಪ್ರೀಂ ಕೋರ್ಟ್‌ನ ಮುಂದಿನ ನಿಲುವು ಪ್ರದೋಷ್ ಅವರ ಮಾಫಿ ಸಾಕ್ಷಿ ವಿಚಾರದ ಮುಂದಿನ ಕಾನೂನು ಪ್ರಕ್ರಿಯೆಯ ಮೇಲೂ ಪರಿಣಾಮ ಬೀರುವ ಸಾಧ್ಯತೆಯಿದೆ.
Share this story