Public Prime News

CLEAR VISION, TRUE MISSION

ಕುಂದಾಪುರ: ಎರಡು ಖಾಸಗಿ ಬಸ್‌ಗಳ ನಡುವೆ ಮುಖಾಮುಖಿ ಢಿಕ್ಕಿ; 28 ಮಂದಿಗೆ ಗಾಯ, ಮೂವರ ಸ್ಥಿತಿ ಗಂಭೀರ..!
local-news

ಕುಂದಾಪುರ: ಎರಡು ಖಾಸಗಿ ಬಸ್‌ಗಳ ನಡುವೆ ಮುಖಾಮುಖಿ ಢಿಕ್ಕಿ; 28 ಮಂದಿಗೆ ಗಾಯ, ಮೂವರ ಸ್ಥಿತಿ ಗಂಭೀರ..!

Public Prime News

Public Prime News

Reported by Public Prime News

ಕುಂದಾಪುರ: 
ಎರಡು ಖಾಸಗಿ ಬಸ್‌ಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ 28 ಮಂದಿ ಗಾಯಗೊಂಡಿದ್ದು, ಅವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಭಾನುವಾರ ಬೆಳಗ್ಗೆ ಮುಳ್ಳಿಕಟ್ಟೆ ಸಮೀಪದ ಅರಾಟೆ ಸೇತುವೆ ಬಳಿ ಈ ಅಪಘಾತ ಸಂಭವಿಸಿದೆ.

ಕುಂದಾಪುರದಿಂದ ಬೈಂದೂರಿನತ್ತ ತೆರಳುತ್ತಿದ್ದ ಶ್ರೀ ದುರ್ಗಾಂಬ ಬಸ್‌ಗೆ, ಮಂತ್ರಾಲಯದಿಂದ ಮಂಗಳೂರಿನತ್ತ ಬರುತ್ತಿದ್ದ ಗಣೇಶ್ ಬಸ್ ಮುಖಾಮುಖಿಯಾಗಿ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಶ್ರೀ ದುರ್ಗಾಂಬ ಬಸ್‌ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.

ಅಪಘಾತದ ಬಳಿಕ ನಿಯಂತ್ರಣ ತಪ್ಪಿದ ಬಸ್ ತಿರುಗಿ, ಹಿಂಬದಿಯಿಂದ ಬರುತ್ತಿದ್ದ ಗೂಡ್ಸ್ ವಾಹನಕ್ಕೂ ಢಿಕ್ಕಿ ಹೊಡೆದಿದೆ. ಇದರಿಂದ ಎರಡು ಬಸ್‌ಗಳ ಪ್ರಯಾಣಿಕರು ಹಾಗೂ ಗೂಡ್ಸ್ ವಾಹನದ ಚಾಲಕ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ಗಾಯಾಳುಗಳಿಗೆ ಕುಂದಾಪುರದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Share this story