ದಕ್ಷಿಣ ಕನ್ನಡ/ಪೆರ್ನೆ:
ಜಿಲ್ಲೆಯಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಪೆರ್ನೆ ಬಳಿ ಚಲಿಸುತ್ತಿದ್ದ ಟಿಪ್ಪರ್ ಲಾರಿಗೆ ಕಾರೊಂದು ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ನಡೆದಿದೆ.
ವೇಗವಾಗಿ ಬಂದ ಕಾರು ನಿಯಂತ್ರಣ ತಪ್ಪಿ ಟಿಪ್ಪರ್ ಲಾರಿಗೆ ಹಿಂದೆಂದ ಜೋರಾಗಿ ಗುದ್ದಿದೆಯೆನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ವಾಹನದಲ್ಲಿದ್ದ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು ಒಳಗೆ ಸಿಲುಕಿಕೊಂಡಿದ್ದರು.
ಕೂಡಲೇ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ನಡೆಸಿ, ಗಾಯಗೊಂಡ ಗಂಭೀರ ಸ್ಥಿತಿಯಲ್ಲಿದ್ದ ಮೂವರನ್ನು ಹೆಚ್ಚಿನ ಚಿಕಿತ್ಸೆಗಾಗಿ ತಕ್ಷಣವೇ ಮಂಗಳೂರಿನ ಆಸ್ಪತ್ರೆಗೆ ರವಾನಿಸಿದ್ದಾರೆ.
ಗಾಯಗೊಂಡಿರುವ ದುರ್ದೈವಿಗಳ ನಿಖರವಾದ ವಿವರಗಳು ಹಾಗೂ ಇವರ ವಿಳಾಸ ಇನ್ನಷ್ಟೇ ಲಭ್ಯವಾಗಬೇಕಿದೆ. ಸ್ಥಳೀಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.


