ಸುಳ್ಯ:
ತಾಲೂಕಿನ ದೇವರಕೊಲ್ಲಿ ಚಾಮುಂಡೇಶ್ವರಿ ದೈವಸ್ಥಾನದ ಸಮೀಪ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಐವರು ಗಾಯಗೊಂಡ ಘಟನೆ ಅಕ್ಟೋಬರ್ 26ರಂದು ನಡೆದಿದೆ.
ಡಿಕ್ಕಿಯ ರಭಸಕ್ಕೆ ಎರಡೂ ಕಾರುಗಳ ಮುಂಭಾಗ ಜಖಂಗೊಂಡಿದೆ. ಗಾಯಾಳುಗಳ ಆರೋಗ್ಯ ಸ್ಥಿತಿ ಹಾಗೂ ಅಪಘಾತಕ್ಕೆ ನಿಖರ ಕಾರಣವೇನು ಎಂಬ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.


