ಉಡುಪಿ/ಮಂಗಳೂರು:
ರಾಜ್ಯದ ವಿವಿಧ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನೂತನ ಪಟ್ಟಿಯನ್ನು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ (AICC) ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅಧಿಕೃತವಾಗಿ ಪ್ರಕಟಿಸಿದ್ದಾರೆ. ಇದರನ್ವಯ ಕರಾವಳಿಯ ಪ್ರಮುಖ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡ ಕಾಂಗ್ರೆಸ್ ಸಮಿತಿಗೆ ಹೊಸ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ.
ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು: ಕಿಶನ್ ಹೆಗ್ಡೆ ಕೊಳ್ಕೆಬೈಲ್
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು: ಪದ್ಮರಾಜ್ ರಾಮಯ್ಯ
ನೂತನ ಅಧ್ಯಕ್ಷರ ಮುಂದಿರುವ ಪ್ರಮುಖ ಸವಾಲುಗಳು:
ಸಂಘಟನೆ ಬಲಪಡಿಸುವುದು:
ಎರಡೂ ಜಿಲ್ಲೆಗಳಲ್ಲಿ ಪಕ್ಷದ ಬೇರುಗಳನ್ನು ಮತ್ತಷ್ಟು ಗಟ್ಟಿಗೊಳಿಸುವುದು.
ಕಾರ್ಯಕರ್ತರಿಗೆ ಚುರುಕು:
ತಳಮಟ್ಟದಲ್ಲಿ ಪಕ್ಷದ ಕಾರ್ಯಕರ್ತರನ್ನು ಸಕ್ರಿಯಗೊಳಿಸಿ ಮುಂಚೂಳಿಗೆ ತರುವುದು.
ರಾಜಕೀಯ ಸಿದ್ಧತೆ:
ಮುಂಬರುವ ಎಲ್ಲಾ ರಾಜಕೀಯ ಚಟುವಟಿಕೆಗಳು ಹಾಗೂ ಚುನಾವಣೆಗಳಿಗೆ ಪಕ್ಷವನ್ನು ಸಮರ್ಥವಾಗಿ ಸಜ್ಜುಗೊಳಿಸುವುದು.
ಕರಾವಳಿ ಭಾಗದಲ್ಲಿ ಪಕ್ಷಕ್ಕೆ ಮರುಜವಾರಿ ನೀಡುವ ನಿಟ್ಟಿನಲ್ಲಿ ಹೈಕಮಾಂಡ್ ಕೈಗೊಂಡಿರುವ ಈ ಹೆಜ್ಜೆ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.


