Public Prime News

CLEAR VISION, TRUE MISSION

ಕಡಬ: ಬಿಳಿನೆಲೆ ಪಿಡಿಒ ದೂರು ಪ್ರಕರಣ; ಹೈಕೋರ್ಟ್‌ನಿಂದ ಮುಂದಿನ ತನಿಖೆಗೆ ಮಧ್ಯಂತರ ತಡೆ
crime

ಕಡಬ: ಬಿಳಿನೆಲೆ ಪಿಡಿಒ ದೂರು ಪ್ರಕರಣ; ಹೈಕೋರ್ಟ್‌ನಿಂದ ಮುಂದಿನ ತನಿಖೆಗೆ ಮಧ್ಯಂತರ ತಡೆ

Public Prime News

Public Prime News

Reported by Public Prime News

ಕಡಬ: 

ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಬಿಳಿನೆಲೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿರುವ (PDO) ಶ್ರೀಮತಿ ಚಂದ್ರಾವತಿ ಅವರು ನೀಡಿದ್ದ ದೂರಿನ ಆಧಾರದ ಮೇಲೆ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಧ್ಯಂತರ ತಡೆ ನೀಡಿ ಆದೇಶಿಸಿದೆ.


ಪ್ರಕರಣದ ಹಿನ್ನೆಲೆ:

  • ಸರ್ಕಾರಿ ಕರ್ತವ್ಯಕ್ಕೆ ನಿರಂತರವಾಗಿ ಅಡ್ಡಿಪಡಿಸಿದ್ದಾರೆ, ಮಾನಸಿಕ ಹಿಂಸೆ ನೀಡಿದ್ದಾರೆ, ವಾಟ್ಸಾಪ್ ಮೂಲಕ ಬೆದರಿಕೆ ಹಾಕಿದ್ದಾರೆ ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿ ಪಿಡಿಒ ಚಂದ್ರಾವತಿ ಅವರು ಪ್ರಸಾದ್ ಕೆ.ಜಿ., ಜೂಲಿಯನ್ ವಿ. ಮತ್ತು ಸಜಿತ್ ಕುಮಾರ್ ಎಸ್. ಅವರ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.


ನ್ಯಾಯಾಲಯದ ಮಧ್ಯಂತರ ಆದೇಶ:

  • ಈ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಅರ್ಜಿದಾರರಾದ ಪ್ರಸಾದ್ ಕೆ.ಜಿ. ಹಾಗೂ ಇತರರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.


  • ಮಾನ್ಯ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠದಲ್ಲಿ ಈ ಕುರಿತು ವಿಚಾರಣೆ ನಡೆಯಿತು.


  • ಪುತ್ತೂರಿನ 2ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ಮುಂದೆ ಬಾಕಿ ಇರುವ ಈ ಪ್ರಕರಣದ ಮುಂದಿನ ತನಿಖೆಗೆ, ಮುಂದಿನ ವಿಚಾರಣೆಯ ದಿನಾಂಕದವರೆಗೆ ಮಧ್ಯಂತರ ತಡೆ ನೀಡಿ ನ್ಯಾಯಪೀಠ ಆದೇಶ ಹೊರಡಿಸಿದೆ.

Share this story