Public Prime News

CLEAR VISION, TRUE MISSION

ಸರ್ಕಾರಿ ಶಾಲೆಗಳಲ್ಲಿ ಓದಿದ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: ವೃತ್ತಿಪರ ಕೋರ್ಸ್‌ಗಳಿಗೆ ಹೊಸ ಮೀಸಲಾತಿ
education

ಸರ್ಕಾರಿ ಶಾಲೆಗಳಲ್ಲಿ ಓದಿದ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: ವೃತ್ತಿಪರ ಕೋರ್ಸ್‌ಗಳಿಗೆ ಹೊಸ ಮೀಸಲಾತಿ

Public Prime News

Public Prime News

Reported by Public Prime News

ಬೆಂಗಳೂರು: 
ವೃತ್ತಿಪರ ಶಿಕ್ಷಣ ಪಡೆಯಲು ಬಯಸುವ ಗ್ರಾಮೀಣ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಮಹತ್ವದ ಸಿಹಿಸುದ್ದಿ ನೀಡಿದೆ. ಸರ್ಕಾರಿ ಶಾಲೆಗಳಲ್ಲಿ 1ರಿಂದ 10ನೇ ತರಗತಿವರೆಗೆ ವ್ಯಾಸಂಗ ಮಾಡಿದ ಅರ್ಹ ಗ್ರಾಮೀಣ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್‌ಗಳ ಸರ್ಕಾರಿ ಸೀಟುಗಳಲ್ಲಿ ಶೇ. 7.5ರಷ್ಟು ಮೀಸಲಾತಿ ಕಲ್ಪಿಸಲು ನಿರ್ಧರಿಸಲಾಗಿದೆ.

ಈ ಕುರಿತು ಕರ್ನಾಟಕ ವೃತ್ತಿಪರ ಶಿಕ್ಷಣ ಸಂಸ್ಥೆಗಳ ಸರ್ಕಾರಿ ಸೀಟುಗಳಿಗೆ ಅಭ್ಯರ್ಥಿಗಳ ಆಯ್ಕೆ (ತಿದ್ದುಪಡಿ) ನಿಯಮಗಳು, 2026ರ ಅಧಿಕೃತ ಗೆಜೆಟ್ ಅಧಿಸೂಚನೆ ಪ್ರಕಟವಾಗಿದ್ದು, ಹೊಸ ನಿಯಮ ತಕ್ಷಣದಿಂದಲೇ ಜಾರಿಗೆ ಬಂದಿದೆ.

ಯಾರಿಗೆ ಎಷ್ಟು ಮೀಸಲಾತಿ.?
ಈವರೆಗೆ ಗ್ರಾಮೀಣ ಕೋಟಾದಡಿ ಲಭ್ಯವಿದ್ದ ಒಟ್ಟು ಶೇ. 15ರಷ್ಟು ಮೀಸಲಾತಿಯನ್ನು ಎರಡು ವಿಭಾಗಗಳಾಗಿ ವಿಂಗಡಿಸಲಾಗಿದೆ.

ಶೇ. 7.5 ಮೀಸಲಾತಿ: ಗ್ರಾಮೀಣ ಪ್ರದೇಶಗಳ ಸರ್ಕಾರಿ ಶಾಲೆಗಳಲ್ಲಿ 1ರಿಂದ 10ನೇ ತರಗತಿವರೆಗೆ ವ್ಯಾಸಂಗ ಮಾಡಿದ ಅರ್ಹ ವಿದ್ಯಾರ್ಥಿಗಳಿಗೆ.

ಶೇ. 7.5 ಮೀಸಲಾತಿ: ಗ್ರಾಮೀಣ ಪ್ರದೇಶಗಳ ಇತರ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಗಳಲ್ಲಿ 1ರಿಂದ 10ನೇ ತರಗತಿವರೆಗೆ ಓದಿದ ಅರ್ಹ ವಿದ್ಯಾರ್ಥಿಗಳಿಗೆ.

ಗ್ರಾಮೀಣ ವಿದ್ಯಾರ್ಥಿಗಳಿಗೆ ಅನುಕೂಲ
ವೃತ್ತಿಪರ ಶಿಕ್ಷಣ ಸಂಸ್ಥೆಗಳ ಸರ್ಕಾರಿ ಸೀಟುಗಳ ಪ್ರವೇಶ ಪ್ರಕ್ರಿಯೆಯಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶ ಕಲ್ಪಿಸುವುದು ಈ ತಿದ್ದುಪಡಿಯ ಉದ್ದೇಶವಾಗಿದೆ. ವಿಶೇಷವಾಗಿ ಸರ್ಕಾರಿ ಶಾಲೆಗಳಲ್ಲಿ ಓದಿದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಮೀಸಲಾತಿ ದೊರೆಯುವುದರಿಂದ ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ಪಡೆಯುವ ಸಂದರ್ಭದಲ್ಲಿ ಅನುಕೂಲವಾಗುವ ನಿರೀಕ್ಷೆಯಿದೆ.

Share this story