Public Prime News

CLEAR VISION, TRUE MISSION

ಎಬೋಲಾ ವೈರಸ್ ಭೀತಿ: ಕರ್ನಾಟಕದಲ್ಲಿ ಹೈ ಅಲರ್ಟ್; ಸಚಿವ ದಿನೇಶ್ ಗುಂಡೂರಾವ್ ಮಹತ್ವದ ಸೂಚನೆ..!
health

ಎಬೋಲಾ ವೈರಸ್ ಭೀತಿ: ಕರ್ನಾಟಕದಲ್ಲಿ ಹೈ ಅಲರ್ಟ್; ಸಚಿವ ದಿನೇಶ್ ಗುಂಡೂರಾವ್ ಮಹತ್ವದ ಸೂಚನೆ..!

Public Prime News

Public Prime News

Reported by Public Prime News

ಬೆಂಗಳೂರು:

ಆಫ್ರಿಕಾ ಖಂಡದಲ್ಲಿ ಮರಣಮೃದಂಗ ಬಾರಿಸುತ್ತಿರುವ ಮಾರಕ 'ಎಬೋಲಾ ವೈರಸ್' (Ebola Virus) ಇಡೀ ವಿಶ್ವವನ್ನೇ ಮತ್ತೊಮ್ಮೆ ಆತಂಕಕ್ಕೆ ತಳ್ಳಿದೆ. ಇದರ ಬೆನ್ನಲ್ಲೇ ಕರ್ನಾಟಕದಲ್ಲೂ ಕಟ್ಟೆಚ್ಚರ ವಹಿಸಲಾಗುತ್ತಿದ್ದು, ರಾಜ್ಯ ಆರೋಗ್ಯ ಇಲಾಖೆ ಸಂಪೂರ್ಣ ಸನ್ನದ್ಧವಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಎಬೋಲಾ ವೈರಸ್ ನಿಯಂತ್ರಣ ಹಾಗೂ ಮುಂಜಾಗ್ರತಾ ಕ್ರಮಗಳ ಕುರಿತು ಮಹತ್ವದ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ.


  • ಆಫ್ರಿಕಾದಲ್ಲಿ ಎಬೋಲಾ ಆರ್ಭಟ:

  • ಸದ್ಯ ಆಫ್ರಿಕಾ ಖಂಡದ ಕಾಂಗೋ ಮತ್ತು ಉಗಾಂಡ ದೇಶಗಳಲ್ಲಿ ಎಬೋಲಾ ವೈರಸ್ ವೇಗವಾಗಿ ಹರಡುತ್ತಿದ್ದು, ಅಲ್ಲಿನ ಜನರಲ್ಲಿ ತೀವ್ರ ಭೀತಿ ಮೂಡಿಸಿದೆ.


  • ಭಾರತದಲ್ಲಿ ಸದ್ಯಕ್ಕೆ ಆತಂಕವಿಲ್ಲ:

  • ದೇಶದಲ್ಲಿ ಇದುವರೆಗೆ ಒಂದೇ ಒಂದು ಎಬೋಲಾ ಪ್ರಕರಣವೂ ಪತ್ತೆಯಾಗಿಲ್ಲ. ಆದರೂ ಮುಂಜಾಗ್ರತಾ ಕ್ರಮವಾಗಿ ದೇಶದ ಪ್ರಮುಖ ನಗರಗಳು ಮತ್ತು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ತೀವ್ರ ನಿಗಾ ವಹಿಸಲು ತಜ್ಞರು ಸೂಚಿಸಿದ್ದಾರೆ.


  • ಕೇಂದ್ರದ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲನೆ: 

  • ಈ ಹಿಂದೆ ಕೋವಿಡ್‌ನಂತಹ ಕಠಿಣ ಪರಿಸ್ಥಿತಿಯನ್ನು ಯಶಸ್ವಿಯಾಗಿ ನಿಭಾಯಿಸಿರುವ ಇತಿಹಾಸ ಹೊಂದಿರುವ ರಾಜ್ಯ ಆರೋಗ್ಯ ಇಲಾಖೆ, ಎಬೋಲಾ ಎದುರಿಸಲು ಸಿದ್ಧವಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯ ಹೊರಡಿಸುವ ಪ್ರತಿಯೊಂದು ಅಧಿಕೃತ ಮಾರ್ಗಸೂಚಿಯನ್ನು ರಾಜ್ಯದಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ.


  • ಅಂತರರಾಷ್ಟ್ರೀಯ ಪ್ರಯಾಣಿಕರ ಮೇಲೆ ತೀವ್ರ ನಿಗಾ: 

  • ಆಫ್ರಿಕಾ ದೇಶಗಳಿಂದ, ವಿಶೇಷವಾಗಿ ಕಾಂಗೋ ಮತ್ತು ಉಗಾಂಡದಿಂದ ಭಾರತಕ್ಕೆ ಬರುವ ಪ್ರವಾಸಿಗರು ಹಾಗೂ ಪ್ರಯಾಣಿಕರನ್ನು ಸೂಕ್ಷ್ಮವಾಗಿ ಗಮನಿಸಲಾಗುವುದು. ವಿಮಾನ ನಿಲ್ದಾಣಗಳಲ್ಲಿ ತಪಾಸಣಾ ಪ್ರಕ್ರಿಯೆಗಳನ್ನು ಕಟ್ಟುನಿಟ್ಟಾಗಿಸುವ ಕುರಿತು ಕೇಂದ್ರದಿಂದ ಸೂಚನೆ ಬಂದ ತಕ್ಷಣವೇ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ.

ಯಾವುದೇ ರೀತಿಯ ತುರ್ತು ಪರಿಸ್ಥಿತಿ ಎದುರಾದರೂ ಅದನ್ನು ನಿಯಂತ್ರಿಸಲು ಸರ್ಕಾರ ಸನ್ನದ್ಧವಾಗಿದ್ದು, ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಸಚಿವರು ಸಾರ್ವಜನಿಕರಿಗೆ ಧೈರ್ಯ ತುಂಬಿದ್ದಾರೆ.

Share this story