ಬೆಂಗಳೂರು:
ಕರ್ನಾಟಕ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಮೇ 28) ಮಧ್ಯಾಹ್ನ 3 ಗಂಟೆಗೆ ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಲಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯ ಮೇರೆಗೆ ಅವರು ಈ ನಿರ್ಧಾರ ಕೈಗೊಂಡಿದ್ದಾರೆ.
ಭಾವನಾತ್ಮಕ ವಿದಾಯ:
ಇಂದು ಬೆಳಿಗ್ಗೆ ನಡೆದ ಸಚಿವರ 'ಬ್ರೇಕ್‌ಫಾಸ್ಟ್ ಮೀಟಿಂಗ್'ನಲ್ಲಿ ಸಿದ್ದರಾಮಯ್ಯ ರಾಜೀನಾಮೆ ನಿರ್ಧಾರ ಪ್ರಕಟಿಸಿದರು. ಈ ವೇಳೆ ಡಿಕೆಶಿ ಅವರು ಸಿಎಂ ಕಾಲಿಗೆ ಬಿದ್ದು ಆಶೀರ್ವಾದ ಪಡೆದರು.
ಪರಮೇಶ್ವರ್ ಹೇಳಿಕೆ:
ಕಳೆದ 3 ವರ್ಷಗಳಿಂದ ಸಹಕರಿಸಿದ ಸಚಿವರಿಗೆ ಧನ್ಯವಾದ ತಿಳಿಸಲು ಸಿಎಂ ಈ ಸಭೆ ಕರೆದಿದ್ದರು ಎಂದು ಗೃಹ ಸಚಿವ ಜಿ. ಪರಮೇಶ್ವರ್ ಖಚಿತಪಡಿಸಿದ್ದಾರೆ.
ಮುಂದಿನ ಸಿಎಂ ಯಾರು.?
ಡಿ.ಕೆ. ಶಿವಕುಮಾರ್ ಮುಂದಿನ ಮುಖ್ಯಮಂತ್ರಿಯಾಗುವುದು ಬಹುತೇಕ ಖಚಿತವಾಗಿದ್ದು, ಈಗಾಗಲೇ ಅವರ ಬೆಂಬಲಿಗರು ಸಿಹಿ ಹಂಚಿ ಸಂಭ್ರಮಿಸುತ್ತಿದ್ದಾರೆ.
ಹೈಕಮಾಂಡ್ ಆಫರ್:
ಸಿದ್ದರಾಮಯ್ಯ ಅವರಿಗೆ ದೆಹಲಿ ಮಟ್ಟದಲ್ಲಿ ದೊಡ್ಡ ರಾಷ್ಟ್ರೀಯ ಜವಾಬ್ದಾರಿ ಹಾಗೂ ರಾಜ್ಯಸಭಾ ಸೀಟು ಸಿಗುವ ಸಾಧ್ಯತೆ ಇದೆ.
ಮಧ್ಯಾಹ್ನ 3 ಗಂಟೆಗೆ ಸಿದ್ದರಾಮಯ್ಯ ಅವರು ಅಧಿಕೃತವಾಗಿ ಸುದ್ದಿಗೋಷ್ಠಿ ನಡೆಸಿ, ಬಳಿಕ ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಲಿದ್ದಾರೆ.


