ಮಂಗಳೂರು:
ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 35 ವರ್ಷದ ಅರ್ಚನಾ ಎಂಬಾಕೆ ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿದೆ. ಸೆಪ್ಟೆಂಬರ್ 17ರಂದು ಕೆಲಸಕ್ಕೆಂದು ಮನೆಯಿಂದ ತೆರಳಿದ್ದ ಅವರು ಮರಳಿ ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ.
ಅರ್ಚನಾ ಅವರು ರಾಘವೇಂದ್ರ (42) ಎಂಬಾತನೊಂದಿಗೆ ಹೋಗಿರುವುದಾಗಿ ತಿಳಿದುಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಕಾಣೆಯಾದ ಮಹಿಳೆಯ ಚಹರೆ:
ವಯಸ್ಸು: 35 ವರ್ಷ
ಎತ್ತರ: ಸುಮಾರು 5 ಅಡಿ
ಮುಖ: ದುಂಡುಮುಖ
ಮೈಕಟ್ಟು: ದಪ್ಪ ಶರೀರ
ಧರಿಸಿದ್ದ ಉಡುಪು: ಬಿಳಿ ಬಣ್ಣದ ಚುಕ್ಕೆಗಳಿರುವ ಚೂಡಿದಾರ
ಭಾಷೆ: ಕನ್ನಡ ಮತ್ತು ತುಳು
ಅರ್ಚನಾ ಅವರ ಬಗ್ಗೆ ಯಾವುದೇ ಮಾಹಿತಿ ದೊರೆತಲ್ಲಿ ಸುರತ್ಕಲ್ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಠಾಣಾಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಸಾರ್ವಜನಿಕರಲ್ಲಿ ಮನವಿ: ಕಾಣೆಯಾದ ಮಹಿಳೆಯ ಸುಳಿವು ಸಿಕ್ಕಲ್ಲಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿ ಸಹಕರಿಸುವಂತೆ ಕೋರಲಾಗಿದೆ.


