Public Prime News

CLEAR VISION, TRUE MISSION

ಮಂಗಳೂರಿನ ಹಂಪನಕಟ್ಟೆಯಲ್ಲಿ ಅಗ್ನಿ ಅವಘಡ: ಬೆಂಕಿಗಾಹುತಿಯಾದ ಯುರೋಪ್ ಶೂ ಅಂಗಡಿ
local-news

ಮಂಗಳೂರಿನ ಹಂಪನಕಟ್ಟೆಯಲ್ಲಿ ಅಗ್ನಿ ಅವಘಡ: ಬೆಂಕಿಗಾಹುತಿಯಾದ ಯುರೋಪ್ ಶೂ ಅಂಗಡಿ

Public Prime News

Public Prime News

Reported by Public Prime News

ಮಂಗಳೂರಿನ ಜನನಿಬಿಡ ಹಂಪನಕಟ್ಟೆ ಪ್ರದೇಶದಲ್ಲಿ ಮಂಗಳವಾರ ಬೆಳಗ್ಗೆ ಈ ಅವಘಡ ಸಂಭವಿಸಿದೆ.'ಯುರೋಪ್' ಹೆಸರಿನ ಪ್ರಸಿದ್ಧ ಶೂ ಅಂಗಡಿಯಲ್ಲಿ ಸಂಭವಿಸಿದ ಭಾರೀ ಬೆಂಕಿ ಅವಘಡದಿಂದ ಅಂಗಡಿಯು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ.ಬೆಂಕಿಯ ತೀವ್ರತೆ ಹೆಚ್ಚಿದ್ದರಿಂದ ಪಕ್ಕದ ಇತರೆ ಎರಡು ಅಂಗಡಿಗಳಿಗೂ ಕೆನ್ನಾಲಿಗೆ ವ್ಯಾಪಿಸಿ ಆತಂಕ ಸೃಷ್ಟಿಸಿದೆ. ಪ್ರಾಥಮಿಕ ತನಿಖೆಯಿಂದ ವಿದ್ಯುತ್ ಶಾರ್ಟ್ ಸರ್ಕ್ಯೂಟ್  ಈ ಅನಾಹುತಕ್ಕೆ ಕಾರಣವೆಂದು ಶಂಕಿಸಲಾಗಿದೆ.ಸ್ಥಳಕ್ಕೆ ಧಾವಿಸಿರುವ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಬೆಂಕಿ ನಂದಿಸುವ ಮತ್ತು ಪರಿಸ್ಥಿತಿ ನಿಯಂತ್ರಿಸುವ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಇದರಿಂದ ಅಪಾರ ಪ್ರಮಾಣದ ಆರ್ಥಿಕ ನಷ್ಟ ಉಂಟಾಗಿದೆ
Share this story