Public Prime News

CLEAR VISION, TRUE MISSION

ಕಲಬುರಗಿಯಲ್ಲಿ ಭೀಕರ ರಸ್ತೆ ಅಪಘಾತ: ಲಾರಿ-ಕ್ರೂಸರ್ ಮಧ್ಯೆ ಡಿಕ್ಕಿ, ಒಂದೇ ಕುಟುಂಬದ ಐವರ ದುರ್ಮರಣ..!
crime

ಕಲಬುರಗಿಯಲ್ಲಿ ಭೀಕರ ರಸ್ತೆ ಅಪಘಾತ: ಲಾರಿ-ಕ್ರೂಸರ್ ಮಧ್ಯೆ ಡಿಕ್ಕಿ, ಒಂದೇ ಕುಟುಂಬದ ಐವರ ದುರ್ಮರಣ..!

Public Prime News

Public Prime News

Reported by Public Prime News

ಕಲಬುರಗಿ: 
ಜಿಲ್ಲೆಯಲ್ಲಿ ಶನಿವಾರ ಬೆಳ್ಳಂಬೆಳಗ್ಗೆ ಘೋರ ರಸ್ತೆ ದುರಂತವೊಂದು ಸಂಭವಿಸಿದೆ. ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ನಡೆದ ಭೀಕರ ಡಿಕ್ಕಿಗೆ ಒಂದೇ ಕುಟುಂಬದ ಐದು ಜನ ಸ್ಥಳದಲ್ಲೇ ಜೀವ ಕಳೆದುಕೊಂಡಿದ್ದಾರೆ.

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ಈ ಅಪಘಾತ ಸಂಭವಿಸಿದೆ. ಲಾರಿಯು ಅತಿ ವೇಗವಾಗಿ ಬಂದು ಕ್ರೂಸರ್ ವಾಹನಕ್ಕೆ ಡಿಕ್ಕಿ ಹೊಡೆದಿದ್ದು, ಹೊಡೆತದ ರಭಸಕ್ಕೆ ಕ್ರೂಸರ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳು ಚಿತ್ತಾಪುರ ತಾಲೂಕಿನ ಇಂಗಳಗಿ ಗ್ರಾಮಕ್ಕೆ ಸೇರಿದ ಒಂದೇ ಕುಟುಂಬದ ಸದಸ್ಯರು ಎಂದು ಗುರುತಿಸಲಾಗಿದೆ. ಒಟ್ಟಿಗೆ ಪ್ರಯಾಣಿಸುತ್ತಿದ್ದ ಇಡೀ ಕುಟುಂಬವೇ ಈ ದುರಂತದಲ್ಲಿ ನಲುಗಿಹೋಗಿದೆ.

ಭೀಕರ ಅಪಘಾತದ ಬೆನ್ನಲ್ಲೇ ಲಾರಿ ಚಾಲಕ ವಾಹನವನ್ನು ಬಿಟ್ಟು ಸ್ಥಳದಿಂದ ಕಾಲ್ಕಿತ್ತಿದ್ದಾನೆ. ಸದ್ಯ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಬಗ್ಗೆ ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಲೆಮರೆಸಿಕೊಂಡಿರುವ ಲಾರಿ ಚಾಲಕನಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.

Share this story