ದಲಿತ ಸಮುದಾಯ ಈ ನಾಡಿನ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಸಮುದಾಯ. ಈ ಸಮುದಾಯದ ಹಲವರು ಸಮಾಜ ಸೇವೆಯಲ್ಲಿ ಗುರುತಿಸಿಕೊಂಡು ರಾಜಕೀಯ ರಂಗದಲ್ಲಿ ಉನ್ನತ ಸ್ಥಾನಮಾನ ಅಲಂಕರಿಸಿದ್ದಾರೆ. ಆದ್ರೆ ಇದು ಕೇವಲ ಸಚಿವ ಸ್ಥಾನಕ್ಕೆ ಮಾತ್ರ ಸೀಮಿತವಾಗಿದೆ. ಇದೀಗ ರಾಜಕೀಯ ಬದಲಾವಣೆ ರಾಜ್ಯ ರಾಜಕೀಯದಲ್ಲಿ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ದಲಿತ ಸಮುದಾಯದ ಮುಖಂಡರಾದ ಹಾಗೂ ನಾಡಿನ ಹಿರಿಯ ರಾಜಕಾರಣಿ ಹಾಲಿ ಗೃಹ ಸಚಿವರಾದ ಡಾ. ಜಿ ಪರಮೇಶ್ವರ್ ಅವರನ್ನ ಸಿಎಂ ಸ್ಥಾನಕ್ಕೆ ನೇಮಕ ಮಾಡಬೇಕಾಗಿದೆ. ಆ ಮೂಲಕ ರಾಜ್ಯದ ಅತಿ ಹೆಚ್ಚು ಜನಸಂಖ್ಯೆ ಇರೋ ದಲಿತ ಸಮುದಾಯಕ್ಕೆ ನ್ಯಾಯ ಒದಗಿಸಬೇಕಾಗಿ ಕಾಂಗ್ರೆಸ್ ಹೈ ಕಮಾಂಡ್ ಗೆ ಈ ಮೂಲಕ ಮನವಿ ಮಾಡಿಕೊಳ್ಳುತ್ತೇನೆ ಎಂದು ಉದ್ಯಮಿ ಹಾಗೂ ಸಮಾಜ ಸೇವಕ ಸುರೇಶ್ ರಾಜ್, ದಲಿತ ಸಂಘಟನೆಯ ಮಹಾಒಕ್ಕೂಟದ ಅಧ್ಯಕ್ಷ ಡಾ.ಎಂ ವೆಂಕಟಸ್ವಾಮಿ, ಸೇರಿದಂತೆ ಹಲವಾರು ಮಂದಿ ಭಾಗಿಯಾಗಿದ್ದರು
ಡಾ. ಜಿ ಪರಮೇಶ್ವರ್ ಸಿಎಂ ಮಾಡುವಂತೆ ಆಗ್ರಹಿಸಿ ಸುದ್ದಿಗೋಷ್ಠಿ...!

Public Prime News
Reported by Public Prime News

