ಬೆಂಗಳೂರು:
ರಾಜ್ಯ ಸರ್ಕಾರದ ಪ್ರಭಾವಿ ಸಚಿವ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬಿಗ್ ಶಾಕ್ ನೀಡಿದ್ದಾರೆ.
ಅಕ್ರಮ ಹಣ ವರ್ಗಾವಣೆ ಹಾಗೂ ವಿವಿಧ ಹಣಕಾಸು ವಹಿವಾಟುಗಳಿಗೆ ಸಂಬಂಧಿಸಿದಂತೆ ಸತೀಶ್ ಜಾರಕಿಹೊಳಿ ಹಾಗೂ ಅವರ ಕುಟುಂಬದವರಿಗೆ ಸೇರಿದ ಒಟ್ಟು 18ಕ್ಕೂ ಅಧಿಕ ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿ ತೀವ್ರ ಶೋಧ ಕಾರ್ಯ ಮುಂದುವರಿಸಿದ್ದಾರೆ.
ಬೆಂಗಳೂರಿನ ಸದಾಶಿವನಗರದ ಸರ್ಕಾರಿ ನಿವಾಸ, ಡಾಲರ್ಸ್ ಕಾಲೋನಿ ಮನೆ ಹಾಗೂ ಬೆಳಗಾವಿ, ಗೋಕಾಕ್ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಬೆಳ್ಳಂಬೆಳಗ್ಗೆಯಿಂದಲೇ ಶೋಧ ಕಾರ್ಯಾಚರಣೆ ಆರಂಭವಾಗಿದೆ.
ಕೇಂದ್ರ ಸರ್ಕಾರದ ತನಿಖಾ ಸಂಸ್ಥೆಯು ಸಚಿವ ಸತೀಶ್ ಜಾರಕಿಹೊಳಿ ಅವರ ವ್ಯವಹಾರಗಳು, ವಿದೇಶಿ ಹೂಡಿಕೆಗಳು ಹಾಗೂ ಇದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸುತ್ತಿದೆ.


