Public Prime News

CLEAR VISION, TRUE MISSION

ಬಿಲ್ಲವ ಸೇವಾ ಸಂಘದ ಮಾಜಿ ಅಧ್ಯಕ್ಷ ಆನಂದ ಪೂಜಾರಿ ಇನ್ನಿಲ್ಲ...!
udupi

ಬಿಲ್ಲವ ಸೇವಾ ಸಂಘದ ಮಾಜಿ ಅಧ್ಯಕ್ಷ ಆನಂದ ಪೂಜಾರಿ ಇನ್ನಿಲ್ಲ...!

Public Prime News

Public Prime News

Reported by Public Prime News

ಉಡುಪಿ:

ಬನ್ನಂಜೆಯ ಬಿಲ್ಲವ ಸೇವಾ ಸಂಘದ ಮಾಜಿ ಅಧ್ಯಕ್ಷರು ಹಾಗೂ ಕರಾವಳಿಯ ಹಿರಿಯ ಕಾಂಗ್ರೆಸ್ ಮುಖಂಡರಾದ ಆನಂದ ಪೂಜಾರಿ (64) ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ಭಾನುವಾರ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.


ಮೂಲತಃ ಕಿದಿಯೂರು ನಿವಾಸಿಯಾದ ಆನಂದ ಪೂಜಾರಿ ಅವರು ಸ್ಥಳೀಯವಾಗಿ ಮತ್ತು ಸಹಕಾರಿ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಪ್ರಮುಖ ಗಣ್ಯರಾಗಿದ್ದರು.


ಸಹಕಾರಿ ಮತ್ತು ರಾಜಕೀಯ ಕ್ಷೇತ್ರದಲ್ಲಿ ಅಪಾರ ಸೇವೆ: 

ಮೃತ ಆನಂದ ಪೂಜಾರಿ ಅವರು ಬ್ರಹ್ಮಗಿರಿಯ ಆದರ್ಶ ವಿವಿಧೋದ್ದೇಶ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಸುದೀರ್ಘ ಸೇವೆ ಸಲ್ಲಿಸಿದ್ದರು. ಇದರೊಂದಿಗೆ ಅಂಬಲಪಾಡಿ ಗ್ರಾಮ ಪಂಚಾಯತ್‌ನ ಮಾಜಿ ಉಪಾಧ್ಯಕ್ಷರಾಗಿಯೂ ಅವರು ಸಾರ್ವಜನಿಕ ರಂಗದಲ್ಲಿ  ಗುರುತಿಸಿಕೊಂಡಿದ್ದರು. ಬಿಲ್ಲವ ಸಮಾಜದ ಏಳಿಗೆಗಾಗಿ ಬನ್ನಂಜೆ ಬಿಲ್ಲವ ಸೇವಾ ಸಂಘದ ಮೂಲಕ ಅವರು ನೀಡಿದ ಕೊಡುಗೆ ಅಪಾರ.


ಇಂದು ಸಂಜೆ ಅಂತ್ಯಕ್ರಿಯೆ: 

ಮೃತರು ಪತ್ನಿ ಹಾಗೂ ಮೂವರು ಪುತ್ರರು ಸೇರಿದಂತೆ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. ಆನಂದ ಪೂಜಾರಿ ಅವರ ನಿಧನಕ್ಕೆ ಸಮಾಜದ ಗಣ್ಯರು ಮತ್ತು ರಾಜಕೀಯ ಮುಖಂಡರು ತೀವ್ರ ಸಂತಾಪ ಸೂಚಿಸಿದ್ದಾರೆ. ಮೃತರ ಅಂತ್ಯಕ್ರಿಯೆಯು ಸೋಮವಾರ (ಇಂದು) ಸಂಜೆ 4 ಗಂಟೆಗೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ಪ್ರಕಟಣೆಯಲ್ಲಿ ತಿಳಿಸಿವೆ.


Share this story