ಬೆಳ್ತಂಗಡಿ:
ತಾಲೂಕಿನ ಪುದುವೆಟ್ಟು ಗ್ರಾಮದಲ್ಲಿ 20 ವರ್ಷದ ಯುವತಿಯೊಬ್ಬರು ಮನೆಯ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ವರದಿಯಾಗಿದೆ.
ಮೃತ ಯುವತಿಯನ್ನು ಪುದುವೆಟ್ಟು ಗ್ರಾಮದ ಮಿಯಾರು ಕಲ್ಲಂಡ ಮನೆ ನಿವಾಸಿ ಅಣ್ಣಿಗೌಡ ಹಾಗೂ ಮಾಲತಿ ದಂಪತಿಯ ಪುತ್ರಿ ಲಿಶ್ಮಿತಾ ಗೌಡ (20) ಎಂದು ಗುರುತಿಸಲಾಗಿದೆ.
ಲಿಶ್ಮಿತಾ ಅವರು ಮನೆಯಲ್ಲಿದ್ದ ವೇಳೆ ಇದ್ದಕ್ಕಿದ್ದಂತೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನಾರೋಗ್ಯದ ಸಮಸ್ಯೆಯಿಂದ ಮನನೊಂದು ಈ ಕಠಿಣ ನಿರ್ಧಾರ ಕೈಗೊಂಡಿರಬಹುದು ಎಂದು ಶಂಕಿಸಲಾಗಿದೆ.
ಬಳಿಕ ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


